ಹುಬ್ಬಳ್ಳಿ: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದ್ದು, ಎರಡೂರು ತಿಂಗಳಲ್ಲಿ ಚುನಾವಣೆಗೆ ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರದಲ್ಲಿದ್ದಾಗ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಮುಂದೂಡುತ್ತಲೆ ಬಂದಿದೆ. ಆದರೆ, ಈ ಬಾರಿ ನಾವು ಚುನಾವಣೆ ನಡೆಸುವುದು ಖಚಿತ ಎಂದರು. ಇದೇ ವೇಳೆ, ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡ ಪ್ರಕರಣದ ಬಗ್ಗೆ ಮಾತನಾಡಿ, ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿರುವುದು ಸರಿಯಲ್ಲ. ನಾವು ಬಿಜೆಪಿಯವರಿಂದ ದೇಶಪ್ರೇಮ ಕಲಿಯಬೇಕಿಲ್ಲ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



